ಬಂಟ್ವಾಳ, ಎಪ್ರಿಲ್ 20, 2023 (ಕರಾವಳಿ ಟೈಮ್ಸ್) : ನಿಮ್ಮ ಮನೆಯ ಮಗನಾಗಿ, ಕ್ಷೇತ್ರದ ಜನರ ಸೇವಕನಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಹೇಳಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಹಾಗೂ ಅನಂತಾಡಿ ಗ್ರಾಮದಲ್ಲಿ ಪ್ರಮುಖರ ಮನೆಗಳಿಗೆ ಬೇಟಿ ನೀಡಿ ಮತಯಾಚನೆ ನಡೆಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಮೂರು ಬಾರಿ ಪಾದಯಾತ್ರೆ ನಡೆಸಿದ್ದೇನೆ, ಆ ಸಂದರ್ಭದಲ್ಲಿ ಗ್ರಾಮದ ಸಮಸ್ಯೆಗಳನ್ನು ಕಂಡಿದ್ದೇನೆ. ಆ ಬಳಿಕ ಅಂತಹ ಗ್ರಾಮಗಳಿಗೆ ಪ್ರಥಮ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಕಳೆದ ಅನೇಕ ವರ್ಷಗಳಲ್ಲಿ ಅಭಿವೃದ್ಧಿ ಕಾಣದೆ ಇದ್ದು, ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿರುವ ಗ್ರಾಮೀಣ ಭಾಗಗಳಲ್ಲಿ ಮೊದಲ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಲಾಗಿದೆ. ಇದರ ಜೊತೆಯಲ್ಲಿ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಸಮಾನ ರೀತಿಯಲ್ಲಿ ಅನುದಾನ ನೀಡಿ, ಅಭಿವೃದ್ಧಿ ಮಾಡಿದ್ದೇನೆ ಎಂದರು.
ಮುಂದಿನ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರವನ್ನು ರಾಜ್ಯದಲ್ಲಿ ಗುರುತಿಸಲ್ಪಡುವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಬಿಜೆಪಿಯಿಂದ ನನಗೆ ಅವಕಾಶ ನೀಡಿ ಶಾಸಕನಾಗಿ ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
ಕ್ಷೇತ್ರದ ಜನರ ಪ್ರತಿಯೊಂದು ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವುದರ ಜೊತೆಗೆ ಸರಕಾರದಿಂದ ಸಿಗುವ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಕೆಲಸವನ್ನು ಬದ್ಧತೆಯಿಂದ ಮಾಡಿದ್ದು, ಶಾಂತಿ ಮತ್ತು ಅಭಿವೃದ್ಧಿಗೆ ಹೆಚ್ಚಿನ ಅಧ್ಯತೆ ನೀಡಿದ್ದೇನೆ ಎಂದವರು ಹೇಳಿದರು.
ಈ ಸಂದರ್ಭ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾಧವ ಮಾವೆ, ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ, ಸದಸ್ಯರಾದ ಜಯಪ್ರಸಾದ್, ಸಂದೀಪ್, ಜಯಂತಿ, ಮೀನಾಕ್ಷಿ, ಅನಂತಾಡಿ ಗ್ರಾ ಪಂ ಅದ್ಯಕ್ಷ ಗಣೇಶ್ ಪೂಜಾರಿ, ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಭಂಡಾರಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸನತ್ ರೈ ಅನಂತಾಡಿ, ಬೂತ್ ಅಧ್ಯಕ್ಷ ತಿಮ್ಮಪ್ಪ ಗೌಡ, ಪ್ರಮುಖರಾದ ಸೀಮಾ ಮಾದವ, ದೇವಿಪ್ರಸಾದ್ ಶೆಟ್ಟಿ, ಚಿದಾನಂದ ಕಲ್ಮಲೆ, ರಮೇಶ್ ಮೈರ, ದಿನೇಶ್ ಗಣೇಶ್ ಕೋಡಿ, ವೀರಪ್ಪ ಮೂಲ್ಯ, ಗಿರಿಯಪ್ಪ ಗೌಡ, ಕೇಶವ ಶೆಟ್ಟಿ ಕೋಡಿ, ಚಂದ್ರಶೇಖರ್ ಬಾಯಿಲ, ನೋಣಯ್ಯ ಎಂ ಆರ್, ನವೀನ ಶೆಟ್ಟಿ ಪುಲ್ಕಿದಡಿ, ಶಶಿಕಾಂತ್ ಶೆಟ್ಟಿ ಬಾಳಿಕೆ, ಉಗ್ಗಪ್ಪ ಶೆಟ್ಟಿ ಕೊಂಬಿಲ, ಬೂತ್ ಸಮಿತಿ ಅಧ್ಯಕ್ಷರುಗಳಾದ ಸದಾಶಿವ ಕೇಪುಲಕೋಡಿ, ಪ್ರಕಾಶ್ ಪೂಜಾರಿ, ಧನಂಜಯ ಪಾದೆ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment