ಬಂಟ್ವಾಳ, ಎಪ್ರಿಲ್ 16, 2023 (ಕರಾವಳಿ ಟೈಮ್ಸ್) : ಮತದಾನದ ಕರ್ತವ್ಯ ನಿರ್ವಹಣೆ ಬಗ್ಗೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದ 187 ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು 304 ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳೂ ಸೇರಿದಂತೆ ಒಟ್ಟು 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿಯು ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ (ಎಪ್ರಿಲ್ 16) ನಡೆಯಿತು.
22 ಜನ ಸೆಕ್ಟರ್ ಅಧಿಕಾರಿಗಳು ತರಬೇತಿ ನೀಡಿದರು. ಮಾಸ್ಟರ್ ಟ್ರೈನರ್ ಗಳಾದ ಅಬ್ದುಲ್ ರಝಾಕ್, ಉದಯ ಕುಮಾರ್ ಮತ್ತು ಸನತ್ ರಾಮ್ ಮಾರ್ಗದರ್ಶನ ಮಾಡಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಮಟ್ಟದ ತರಬೇತಿ ನೋಡಲ್ ಅಧಿಕಾರಿಯವರು, ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ನಿರ್ದೇಶಕ ನಿರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚುನಾವಣಾಧಿಕಾರಿ ಅಬಿದ್ ಗದ್ಯಾಲ್, ಸಹಾಯಕ ಚುನಾವಣಾಧಿಕಾರಿ ಎಸ್ ಬಿ ಕೂಡಲಗಿ, ಗ್ರೇಡ್ 2 ತಹಶೀಲ್ದಾರ್ ದಯಾನಂದ ಕೆ ಎಸ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮಧು ಎಂ, ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಶೀಲ್ದಾರ್ ನರೇಂದ್ರನಾಥ್ ಮಿತ್ತೂರು, ರಾಜೇಶ್ ನಾಯ್ಕ್ ಎನ್ ಎಂ, ವಿಜಯ ವಿಕ್ರಮ್, ಚುನಾವಣಾ ಕರ್ತವ್ಯ ನಿರತ ಕಂದಾಯ ಇಲಾಖೆ, ಸರ್ವೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
0 comments:
Post a Comment