ಬೆಂಗಳೂರು, ಎಪ್ರಿಲ್ 06, 2023 (ಕರಾವಳಿ ಟೈಮ್ಸ್) : 2023ನೇ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಯುಜಿಸಿಇಟಿ-2023) ಆನ್ ಲೈನ್ ಅರ್ಜಿ ಸಲ್ಲಿಕೆಗೆ ಇದ್ದ ಎಪ್ರಿಲ್ 5 ರ ಅಂತಿಮ ದಿನಾಂಕವನ್ನು ಎಪ್ರಿಲ್ 9 ರ ರಾತ್ರಿ 10 ಗಂಟೆವರೆಗೆ ವಿಸ್ತರಿಸಲಾಗಿದ್ದು, ಶುಲ್ಕ ಪಾವತಿ ಅಂತಿಮ ದಿನಾಂಕವನ್ನು ಎಪ್ರಿಲ್ 10 ರ ಸಂಜೆ 5 ಗಂಟೆವರೆಗೆ ವಿಸ್ತರಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶಿಸಿದೆ.
ಮೇ 20 ರಿಂದ 22ರವರೆಗೆ ಸಿಇಟಿ ಪರೀಕ್ಷೆಗಳು ನಡೆಯಲಿದೆ. ಮೇ 20 ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಶಾಸ್ತ್ರ, ಮೇ 21 ರಂದು ಬೆಳಿಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಮೇ 22 ರಂದು ಬೆಳಿಗ್ಗೆ ಹೊರನಾಡು ಹಾಗೂ ಗಡಿನಾಡ ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಗಳು ನಡೆಯಲಿದೆ.
0 comments:
Post a Comment