ಬಂಟ್ವಾಳ, ಎಪ್ರಿಲ್ 12, 2023 (ಕರಾವಳಿ ಟೈಮ್ಸ್) : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 10 ಲಕ್ಷ ರೂಪಾಯಿ ನಗದು ಹಣವನ್ನು ಪೂಂಜಾಲಕಟ್ಟೆ ಪೊಲೀಸರು ಸೋಮವಾರ ವಾಹನ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪೂಂಜಾಲಕಟ್ಟೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ತಂಡದ ಪೊಲೀಸರು ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಎಟಿಎಂ ವಾಹನದಲ್ಲಿ ಸಮರ್ಪಕ ದಾಖಲೆಗಳಿಲ್ಲದೆ 10 ಲಕ್ಷ ರೂಪಾಯಿ ನಗದು ಹಣವನ್ನು ರಾತ್ರಿ 10 ಗಂಟೆ ಸುಮಾರಿಗೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಪೊಲೀಸರು ಹಣ ಹಾಗೂ ವಾಹನವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಜರುಗಿಸಿದ್ದಾರೆ.
0 comments:
Post a Comment