ಬಂಟ್ವಾಳ, ಎಪ್ರಿಲ್ 19, 2023 (ಕರಾವಳಿ ಟೈಮ್ಸ್) : ವಿಧಾನಸಭಾ ಚುನಾವಣೆಯ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ ರಮಾನಾಥ ರೈ ಅವರು ಪೂರ್ವಭಾವಿಯಾಗಿ ಬುಧವಾರ ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರಲ್ಲದೆ ಹಿರಿಯ ನಾಯಕನ ಆರೋಗ್ಯ, ಯೋಗಕ್ಷೇಮ ವಿಚಾರಿಸಿದರು.
ಈ ಸಂದರ್ಭ ಮಾತನಾಡಿದ ಜನಾರ್ದನ ಪೂಜಾರಿ, ರಮಾನಾಥ ರೈ ಅವರೊಬ್ಬ ಒಳ್ಳಯೆ ಮನುಷ್ಯ, ಬಡ ಜನರಿಗಾಗಿ ಸಾಕಷ್ಟು ಕೆಲಸ ಮಾಡಿದರು. ಬಡವರ ಹಿತಕ್ಕಾಗಿ ರಮಾನಾಥ ರೈ ಅವರನ್ನು ಗೆಲ್ಲಿಸಿ ಎಂದು ಮತದಾರರಿಗೆ ಮನವಿ ಮಾಡಿದರು. ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಇಂತಹ ವಿಷಯಗಳ ಬಗ್ಗೆ ಬಲವಾಗಿ ಮಾತನಾಡುವವರು ಯಾರೂ ಇಲ್ಲ. ಅದಕ್ಕೋಸ್ಕರವಾದರೂ ರಮಾನಾಥ ರೈ ಗೆದ್ದು ಬರಬೇಕು ಎಂದರು.
ಈ ಸಂದರ್ಭ ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಧ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್ ಮೊದಲಾದವರು ಜೊತೆಗಿದ್ದರು.
0 comments:
Post a Comment