ಮಂಗಳೂರು, ಎಪ್ರಿಲ್ 03, 2023 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಭಾನುವಾರ (ಎ 2) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಮಂಗಳೂರು ಪೊಲೀಸ್ ಕಮಿಷನರೇಟ್ ಹಾಗೂ 7ನೇ ಪಡೆ ಕೆಎಸ್‍ಆರ್‍ಪಿ ಮಂಗಳೂರು ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ನಿರೀಕ್ಷಕ ರಾಘವ ಎಸ್ ಪಡೀಲ್ ಅವರು ಗೌರವ ವಂದನೆ ಸ್ವೀಕರಿಸಿದರು.
ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಎಸ್ಪಿ ಡಾ ವಿಕ್ರಂ ಅಮಾಟೆ, ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸಹಿತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ನಿವೃತ್ತ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
0 comments:
Post a Comment