ಬಂಟ್ವಾಳ, ಎಪ್ರಿಲ್ 18, 2023 (ಕರಾವಳಿ ಟೈಮ್ಸ್) : ಸಂಗಬೆಟ್ಟು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯೆ ಶ್ರೀಮತಿ ಶಾಂತಾ ಹಾಗೂ ಅವರ ಪತಿ ಉದಯ ಅವರು ಬಂಟ್ವಾಳದಲ್ಲಿ ರಮಾನಾಥ ರೈ ಅವರ ಅವಧಿಯಲ್ಲಿ ಆಗಿರುವ ಅಭಿವೃದ್ಧಿಯನ್ನು ಮೆಚ್ಚಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಸಂಗಬೆಟ್ಟು ವಲಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಶೆಟ್ಟಿಗಾರ್ ಅವರ ಸಮ್ಮುಖದಲ್ಲಿ ಬಿ ಸಿ ರೋಡಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಾಜಿ ಸಚಿವ, ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಪಕ್ಷದ 9ನೇ ಬಾರಿಯ ಅಭ್ಯರ್ಥಿ ಬಿ ರಮಾನಾಥ ರೈ ಅವರು ಪಕ್ಷ ಸೇರಿದವರಿಗೆ ಪಕ್ಷದ ಧ್ವಜ ಹಸ್ತಾಂತರಿಸಿ, ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರ್, ಬೂತ್ ಅಧ್ಯಕ್ಷರಾದ ರಾಜೇಶ್ ಪೂಜಾರಿ, ಸುರೇಂದ್ರ ಶೆಟ್ಟಿ,ನಾರಾಯಣ ನಾಯ್ಕ, ಸಿದ್ಧಿಕ್ ಸರವು, ಸಿರಾಜ್ ಮದಕ ಮೊದಲಾದವರಿದ್ದರು.
0 comments:
Post a Comment