ಬಂಟ್ವಾಳ, ಮೇ 04, 2023 (ಕರಾವಳಿ ಟೈಮ್ಸ್) : ಕಾಂಗ್ರೆಸ್ ಹಿರಿಯ ಮುಖಂಡ, ಕಲ್ಲಡ್ಕದ ಬಿ ಕೆ ನಗರದ ನಿವಾಸಿ ಬಿ ಕೆ ಇದಿನಬ್ಬ ಕಲ್ಲಡ್ಕ ಅವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ ತೀವ್ರ ಸಂತಾಪ ಸೂಚಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಇದಿನಬ್ಬರ ಸೇವೆಯನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತೇನೆ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ ಎಂದು ರೈ ತಿಳಿಸಿದ್ದಾರೆ.
ಸುಧೀರ್ಘ ಕಾಲ ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಇದಿನಬ್ಬ, ಜನಸೇವೆಯಲ್ಲಿ ಎತ್ತಿದ ಕೈ. ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹಂತದ ಹುದ್ದೆಗಳನ್ನು ನಿರ್ವಹಿಸಿ ಅವರು ಜನಪ್ರಿಯರಾಗಿದ್ದರು. ಬಂಟ್ವಾಳ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯರಾಗಿ, ಬಂಟ್ವಾಳ ಭೂ ನ್ಯಾಯ ಮಂಡಳಿ ಸದಸ್ಯರಾಗಿ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಸದಸ್ಯರಾಗಿ ಮತ್ತು ಕಲ್ಲಡ್ಕದ ಮುಹಿಯುದ್ದೀನ್ ಜುಮಾ ಮಸೀದಿ ಸದಸ್ಯರಾಗಿ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ. ಅವರ ರಾಜಕೀಯ ಹಾಗೂ ಸಾಮಾಜಿಕ ಸೇವೆ ಸದಾ ನೆನಪಿನಲ್ಲಿ ಉಳಿಯುವಂತದ್ದು ಎಂದು ರೈ ಸಂತಾಪ ಸೂಚಕ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.
0 comments:
Post a Comment