ಮುಂಗಾರು ಪೂರ್ವ ಮುನ್ನಚ್ಚರಿಕೆ ವಹಿಸಿಕೊಳ್ಳಲು ಡಿಸಿ-ಸಿಇಒಗಳಿಗೆ ಸಿಎಂ ಸಲಹೆ - Karavali Times ಮುಂಗಾರು ಪೂರ್ವ ಮುನ್ನಚ್ಚರಿಕೆ ವಹಿಸಿಕೊಳ್ಳಲು ಡಿಸಿ-ಸಿಇಒಗಳಿಗೆ ಸಿಎಂ ಸಲಹೆ - Karavali Times

728x90

23 May 2023

ಮುಂಗಾರು ಪೂರ್ವ ಮುನ್ನಚ್ಚರಿಕೆ ವಹಿಸಿಕೊಳ್ಳಲು ಡಿಸಿ-ಸಿಇಒಗಳಿಗೆ ಸಿಎಂ ಸಲಹೆ

ಬೆಂಗಳೂರು, ಮೇ 23, 2023 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಗಾರು ಪೂರ್ವದಲ್ಲಿ ಮುನ್ಸೂಚನೆ ಪಾಲಿಸುವ ನಿಟ್ಟಿನಲ್ಲಿ ಮಂಗಳವಾರ (ಮೇ 23) ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ. ಎಪ್ರಿಲ್ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ, ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು ಎಂದರು. 

ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವು ಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‍ಫಾರ್ಮರ್ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದ ಸಿಎಂ ಅಧಿಕಾರಿಗಳು ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಸ್ವತಃ ಫೀಲ್ಡ್ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ ಎಂದರು. 

ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಲೋಪ ಆಗಬಾರದು ಎಂದ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು, ಸಿಇಓ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೆÇಲೀಸ್ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ ಬಹಳ ಜನ ಜಿಲ್ಲಾಧಿಕಾರಿಗಳು ತಾಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು ಎಂದು ತಾಕೀತು ಮಾಡಿದರು. 

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ-ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಮುಂಗಾರು ಪೂರ್ವ ಮುನ್ನಚ್ಚರಿಕೆ ವಹಿಸಿಕೊಳ್ಳಲು ಡಿಸಿ-ಸಿಇಒಗಳಿಗೆ ಸಿಎಂ ಸಲಹೆ Rating: 5 Reviewed By: karavali Times
Scroll to Top