ಬಂಟ್ವಾಳ, ಮೇ 04, 2023 (ಕರಾವಳಿ ಟೈಮ್ಸ್) : ಕಾಂಗ್ರೆಸ್ ಹಿರಿಯ ಮುಖಂಡ, ಕಲ್ಲಡ್ಕ ಸಮೀಪದ ಬಿ ಕೆ ನಗರ ನಿವಾಸಿ ಬಿ ಕೆ ಇದ್ದಿನಬ್ಬ ಕಲ್ಲಡ್ಕ (75) ಅವರು ಬುಧವಾರ (ಮೇ 3) ಸಂಜೆ ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ನಿಧನರಾದರು.
ಸುದೀರ್ಘ ಕಾಲ ರಾಜಕೀಯ ರಂಗದಲ್ಲಿ ತೊಡಗಿಸಿಕೊಂಡಿದ್ದ ಅವರು ಬಂಟ್ವಾಳ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯರಾಗಿ, ಬಂಟ್ವಾಳ ಭೂನ್ಯಾಯ ಮಂಡಳಿ ಸದಸ್ಯರಾಗಿ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಸದಸ್ಯರಾಗಿ ಹಾಗೂ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
0 comments:
Post a Comment