ಬೆಂಗಳೂರು, ಮೇ 27, 2023 (ಕರಾವಳಿ ಟೈಮ್ಸ್) : 34 ಮಂದಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪಟ್ಟಿ ನಕಲಿಯಾಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಕರ್ನಾಟಕ ಕಾಂಗ್ರೆಸ್ ಎಂಬ ಖಾತೆ ಮೂಲಕ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ. ಯಾರೂ ಸಹ ಊಹಾಪೆÇೀಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ ಎಂದು ಕಾಂಗ್ರೆಸ್ ಮನವಿ ಮಾಡಿದೆ.
ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ತಿಳಿಸಿದೆ. ಕರ್ನಾಟಕ ಸರಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶನಿವಾರ ನಡೆದಿದ್ದು, ಇದರ ಬೆನ್ನಲ್ಲೇ 34 ಮಂದಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂಬ ಪಟ್ಟಿ ವೈರಲ್ ಆಗಿತ್ತು. ಆದರೆ ಅದು ನಕಲಿ ಪಟ್ಟಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಸ್ಪಷ್ಟಪಡಿಸಿದೆ.
0 comments:
Post a Comment