ಬೆಂಗಳೂರು, ಮೇ 07, 2023 (ಕರಾವಳಿ ಟೈಮ್ಸ್) : ಮಾರ್ಚ್-ಎಪ್ರಿಲ್ ತಿಂಗಳಲ್ಲಿ ನಡೆದ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಸೋಮವಾರ (ನಾಳೆ) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಮಂಡಳಿ, ಸೋಮವಾರ ಬೆಳಗ್ಗೆ 10 ಗಂಟೆಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. 11 ಗಂಟೆಯ ನಂತರ ಇಲಾಖೆಯ ವೆಬ್‍ಸೈಟ್‍ನಲ್ಲಿ ಪ್ರಕಟಗೊಳ್ಳಲಿದೆ. ಫಲಿತಾಂಶವನ್ನು http://karresults.nic.in ನಲ್ಲಿ ವೀಕ್ಷಿಸಬಹುದು ಎಂದು ಮಂಡಳಿ ತಿಳಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ರಂದು ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಎಲ್ಲಾ ಜಂಜಾಟಗಳ ನಡುವೆ ಚುನಾವಣೆಗೆ ಮುಂಚೆಯೇ ಫಲಿತಾಂಶ ಪ್ರಕಟಿಸಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಪೂರಕವಾಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕ್ರಮ ಕೈಗೊಂಡಿದೆ.
2022-2023ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 31 ರಿಂದ ಎಪ್ರಿಲ್ 15ರವರೆಗೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
0 comments:
Post a Comment