ಮಂಗಳೂರು, ಮೇ 29, 2023 (ಕರಾವಳಿ ಟೈಮ್ಸ್) : ಮಂಗಳೂರು ಕರ್ನಾಟಕ (ಸರಕಾರಿ) ಪಾಲಿಟೆಕ್ನಿಕ್ ಇಲ್ಲಿ 2023-24ನೇ ಸಾಲಿಗೆ 3 ವರ್ಷಗಳ ಪೂರ್ಣಾವಧಿಯ ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಆನ್‍ಲೈನ್ ಮೆರಿಟ್ ಆಧಾರಿತ ಪ್ರವೇಶಾತಿ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಉಳಿಕೆ ಸೀಟುಗಳನ್ನು ಆಫ್‍ಲೈನ್ ಮೂಲಕ ಹಂಚಿಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಮೇ 31ರೊಳಗೆ ಅರ್ಜಿ ಸಲ್ಲಿಸಬಹುದು. ಜೂನ್ 1 ರಂದು ಬೆಳಿಗ್ಗೆ 10 ಗಂಟೆಗೆ ಮೆರಿಟ್ ವೇಳಾ ಪಟ್ಟಿಯ ಪ್ರಕಟಣೆ ಹಾಗೂ 11 ಗಂಟೆಗೆ ಸೀಟು ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ (ಸರಕಾರಿ) ಪಾಲಿಟೆಕ್ನಿಕ್ ಮಂಗಳೂರು ಅಥವಾ ದೂರವಾಣಿ ಸಂಖ್ಯೆ 0824-2211636, 3500437 ಗಳನ್ನು ಸಂಪರ್ಕಿಸುವಂತೆ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
0 comments:
Post a Comment