ಪುತ್ತೂರು, ಮೇ 18, 2023 (ಕರಾವಳಿ ಟೈಮ್ಸ್) : ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಘಟನೆಗೆ ಸಂಬಂಧಿಸಿದಂತೆ ಅವಿನಾಶ್ ಬಿನ್ ವೇಣುನಾಥ ನರಿಮೊಗ್ರು ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ಡಿಎಸ್ಪಿ, ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಸೈ ಹಾಗೂ ಪಿಸಿ ಹರ್ಷಿತ್ ಅವರ ವಿರುದ್ದ ಪುತ್ತೂರು ನಗರ ಠಾಣಾ ಅಪರಾಧ ಕ್ರಮಾಂಕ 39/2023 ಕಲಂ 323, 324, 506 ಆರ್/ಡಬ್ಲ್ಯು 34 ಐಪಿಸಿಯಂತೆ ಗುರುವಾರ (ಮೇ 18) ಪ್ರಕರಣ ದಾಖಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಬಂಟ್ವಾಳ ಡಿಎಸ್ಪಿ ಅವರಿಗೆ ವಹಿಸಲಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಸೈ ಹಾಗೂ ಪಿಸಿ ಹರ್ಷಿತ್ ಅವರುಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಹಾಗೂ ಪುತ್ತೂರು ಡಿಎಸ್ಪಿ ಅವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ ವಿಕ್ರಂ ಅಮಾಟೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
0 comments:
Post a Comment