ಬಂಟ್ವಾಳ, ಮೇ 08, 2023 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ ರಮಾನಾಥ ರೈ ಅವರು ಬಹಿರಂಗ ಪ್ರಚಾರದ ಕೊನೆ ದಿನವಾದ ಸೋಮವಾರ (ಮೇ 8) ಅಪರಾಹ್ನ ಬಿ ಸಿ ರೋಡಿನಲ್ಲಿ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಲಿದ್ದು, ಬಳಿಕ ಕೈಕಂಬ ಜಂಕ್ಷನ್ನಿನಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ.
ಬಿ ಸಿ ರೋಡು ಮುಖ್ಯ ವೃತ್ತದಿಂದ ಕೈಕಂಬ ಜಂಕ್ಷನ್ ವರೆಗೆ ಕಾರ್ಯಕರ್ತರ ದಂಡಿನೊಂದಿಗೆ ರಮಾನಾಥ ರೈ ಅವರು ಬೃಹತ್ ರೋಡ್ ಶೋ ನಡೆಸಲಿದ್ದಾರೆ. ನಾಮಪತ್ರ ಸಲ್ಲಿಕೆ ದಿನದಂದು ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಮತದಾರ ಬಂಧುಗಳು ಜಮಾಯಿಸಿ ಆ ದಿನವನ್ನು ಐತಿಹಾಸಿಕವಾಗಿ ಮಾಡಿದ್ದೀರಿ. ಇದೀಗ ಚುನಾವಣಾ ಪ್ರಚಾರದ ಪ್ರಯುಕ್ತ ಬಹಿರಂಗ ಪ್ರಚಾರದ ಕೊನೆ ದಿನವಾದ ಸೋಮವಾರ ಚುನಾವಣೆಯ ಪ್ರಯುಕ್ತ ನಡೆಯುವ ಕೊನೆ ಸಾರ್ವಜನಿಕ ಕಾರ್ಯಕ್ರಮದಲ್ಲೂ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಕ್ಷೇತ್ರದ ಮತದಾರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ರಮಾನಾಥ ರೈ ಅವರು ಈ ಸಂದರ್ಭ ಮನವಿ ಮಾಡಿಕೊಂಡಿದ್ದಾರೆ.
0 comments:
Post a Comment