ನವದೆಹಲಿ, ಮೇ 18, 2023 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಗುರುವಾರ ಅಧಿಕೃತವಾಗಿ ಘೋಷಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್‍ದೀಪ್ ಸಿಂಗ್ ಸುರ್ಜೇವಾಲಾ ಅವರು ದೆಹಲಿಯಲ್ಲಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ.
ಸರಕಾರದಲ್ಲಿ ಒಂದೇ ಡಿಸಿಎಂ ಹುದ್ದೆ ಇರಲಿದ್ದು, ಡಿಕೆ ಶಿವಕುಮಾರ್ ಅದನ್ನು ನಿಭಾಯಿಸಲಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ನಡೆಯುವರೆಗೂ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದವರು ತಿಳಿಸಿದರು.
ಮುಖ್ಯಮಂತ್ರಿ ಪದವಿ ವಿಭಾಗಿಸಲಾಗುತ್ತಿದೆಯೇ ಅಥವಾ ಐದು ವರ್ಷ ಪೂರ್ಣಾವಧಿಗೆ ಸಿದ್ದು ಮುಖ್ಯಮಂತ್ರಿಯಾಗಲಿದ್ದಾರಾ ಎಂಬ ಪ್ರಶ್ನೆಗೆ ನಾಯಕರು ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ. ಕರ್ನಾಟಕ ಜನರ ಸೇವೆ ಮಾಡಲು ಕಾಂಗ್ರೆಸ್ ಬದ್ಧವಾಗಿದೆ. 5 ಗ್ಯಾರಂಟಿಗಳನ್ನು ಸರ್ಕಾರ ಈಡೇರಿಸಲಿದೆ ಎಂದು ವಿವರಿಸಿದರು.
ಸರ್ಕಾರದಲ್ಲಿ ಒಬ್ಬರಿಗೆ ಮಾತ್ರ ಡಿಸಿಎಂ £ೀಡಲಾಗುತ್ತದೆ. ಸಚಿವ ಸ್ಥಾನದಲ್ಲಿ ಎಲ್ಲಾ ಸಮುದಾಯದವರಿಗೂ ಪ್ರಾತಿನಿಧ್ಯ £ೀಡಲಾಗುವುದು ಎಂದು ವೇಣುಗೋಪಾಲ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಮೇ 20 ರಂದು ಶನಿವಾರ ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ 2ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೊತೆಗೆ ಆರು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ಮೊದಲ ಹಂತದಲ್ಲಿ ಡಾ ಜಿ ಪರಮೇಶ್ವರ್, ಎಂ ಬಿ ಪಾಟೀಲ್, ಕೆ ಎಚ್ ಮುನಿಯಪ್ಪ, ಎಚ್ ಕೆ ಪಾಟೀಲ್, ಬಿ ಕೆ ಹರಿಪ್ರಸಾದ್, ಸತೀಶ್ ಜಾರಕಿಹೊಳಿ ಹಾಗೂ ಯು ಟಿ ಖಾದರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ.
ಇಂದು (ಮೇ 18 ಗುರುವಾರ) ಸಂಜೆಯೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆದಿದ್ದಾರೆ.
0 comments:
Post a Comment