ಬಂಟ್ವಾಳ, ಮೇ 07, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಶಾಸಕ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಯು ರಾಜೇಶ್ ನಾಯಕ್ ಅವರ ಪರವಾಗಿ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಸಂಜೆ ಬಿ ಸಿ ರೋಡಿನಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆಗೈದರು.
ಶನಿವಾರ ಪುತ್ತೂರಿಗೆ ಆಗಮಿಸಿದ ಯೋಗಿ ಅವರು ಬಳಿಕ ಕಾರ್ಕಳಕ್ಕೆ ತೆರಳಿ ಸಂಜೆ ವೇಳೆಗೆ ಹೆಲಿಕಾಪ್ಟರ್ ಮೂಲಕ ಬಂಟ್ವಾಳ ಸಮೀಪದ ಬಸ್ತಿಪಡ್ಪುವಿನಲ್ಲಿ ತಾತ್ಕಾಲಿಕ ನಿರ್ಮಿಸಲಾದ ಹೆಲಿಪ್ಯಾಡ್ ನಲ್ಲಿ ಬಂದಿಳಿದರು. ಅಲ್ಲಿಂದ ಕಾರಿನಲ್ಲಿ ರಸ್ತೆ ಮೂಲಕ ಕೈಕಂಬ ಪೆÇಳಲಿ ದ್ವಾರದ ಬಳಿ ಬಂದು ಅಲ್ಲಿಂದ ತೆರೆದ ವಾಹನದಲ್ಲಿ ಹೆದ್ದಾರಿಯಲ್ಲಿ ತೆರೆದ ವಾಹನದ ಮೂಲಕ ಬಿ ಸಿ ರೋಡು ಖಾಸಗಿ ಬಸ್ ನಿಲ್ದಾಣದವರೆಗೆ ರೋಡ್ ಶೋ ಮೂಲಕ ಮತಯಾಚನೆಗೈದರು.
ಯೋಗಿ ಆದಿತ್ಯನಾಥ್ ಅವರೊಂದಿಗೆ ತೆರೆದ ವಾಹನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ್, ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯು ರಾಜೇಶ್ ನಾಯ್ಕ್ ಉಳಿಪಾಡಿ ಜೊತೆಗಿದ್ದರು. ರೋಡ್ ಶೋ ಮಧ್ಯೆ ತೆರೆದ ವಾಹನದಲ್ಲೇ ಯೋಗಿ ಅವರು ನೆರೆದ ಸಹಸ್ರಾರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಬಳಿಕ ಕತ್ತಲಾದ್ದರಿಂದ ಹೆಲಿಕಾಪ್ಟರ್ ಬದಲಿಗೆ ರಸ್ತೆ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ ಯೋಗಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ನಿರ್ಗಮಿಸಿದರು.
0 comments:
Post a Comment