ಬಂಟ್ವಾಳ, ಮೇ 17, 2023 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 13 ರಂದು ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ಮೋಟಾರ್ ಸೈಕಲಿನಲ್ಲಿ ಬಂದ ಅಪರಿಚಿತ ವ್ಯಕ್ತಿ ಮೋಟಾರ್ ಬೈಕ್ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ತನಿಖೆ ಕೈಗೊಂಡ ಪೊಲೀಸರು ಪ್ರಕರಣದ ಆರೋಪಿ ಕನ್ಯಾನ ನಿವಾಸಿ, ಅಬೂಬಕ್ಕರ್ ಕೆ (46) ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವಿಟ್ಲ ಠಾಣಾ ಪೊಲೀಸ್ ಇನ್ಸ್‍ಪೆಕ್ಟರ್ ನಾಗರಾಜ್ ಎಚ್ ಇ ಅವರ ನೇತೃತ್ವದಲ್ಲಿ ಪಿಎಸ್ಸೈ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ರಕ್ಷಿತ್, ಹೇಮರಾಜ ಅವರು ಪ್ರಕರಣ ಬೇಧಿಸಿದ್ದಾರೆ.
0 comments:
Post a Comment