ಬೆಂಗಳೂರು, ಜೂನ್ 08, 2023 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಹಜ್ ಸಮಿತಿ ವತಿಯಿಂದ ಆಯೋಜಿಸಿದ್ದ 2023ನೇ ಸಾಲಿನ ಹಜ್ ವಿಮಾನಯಾನ ಯಾತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ (ಮೇ 7) ಉದ್ಘಾಟಿಸಿದರು.
ಅಮೀರೇ ಶಿರಿಯತ್ ಕರ್ನಾಟಕದ ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಸಾಹೆಬ್ ಮತ್ತು ವಿಜಯಪುರದ ಅಲ್ ಹಶ್ಮಿ ಟ್ರಸ್ಟ್ ಅಧ್ಯಕ್ಷ ಮೌಲಾನಾ ಮಫ್ತಿ ಇಫ್ತಿಕಾರ್ ಅಹಮದ್ ಖಶ್ಮಿ ಸಾಹೆಬ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಸತಿ, ಹಜ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಬಿ ಝಡ್ ಝಮೀರ್ ಅಹ್ಮದ್ ಖಾನ್, ಹಜ್ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
0 comments:
Post a Comment