ಬಂಟ್ವಾಳ, ಜೂನ್ 22, 2023 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಬಿ ಸಿ ರೋಡು ಸಮೀಪದ ಪರ್ಲಿಯ-ಮದ್ದ ಬಳಿ ಮುಖ್ಯ ರಸ್ತೆಯಲ್ಲಿ ಕಳೆದ ಮೂರು ದಿನಗಳಿಂದ ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿರುವ ಬಗ್ಗೆ ಬುಧವಾರ ಕರಾವಳಿ ಟೈಮ್ಸ್ ಸಚಿತ್ರ ವರದಿ ಪ್ರಕಟಿಸಿ ಎಚ್ಚರಿಸಿದ ಪರಿಣಾಮ ತಕ್ಷಣ ಎಚ್ಚೆತ್ತ ಪುರಸಭಾಧಿಕಾರಿಗಳು ಪೈಪ್ ಲೈನ್ ರಿಪೇರಿ ಕಾಮಗಾರಿಗೆ ಕ್ರಮ ಕೈಗೊಂಡಿದ್ದಾರೆ.
ಪುರಸಭಾ ಪ್ಲಂಬರ್ ಇಬ್ರಾಹಿಂ ಪಲ್ಲಮಜಲು ಅವರ ನೇತೃತ್ವದಲ್ಲಿ ಗುರುವಾರವೇ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದ್ದು, ಕುಡಿಯುವ ನೀರು ಪೋಲಾಗುವುದನ್ನು ತಡೆಗಟ್ಟಲಾಗಿದೆ. ಮಳೆ ಕಡಿಮೆ ಇರುವುದರಿಂದ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಇದ್ದು, ಪೈಪ್ ಲೈನ್ ಒಡೆದು ನೀರು ಪೋಲಾಗುತ್ತಿರುವ ಬಗ್ಗೆ ಪತ್ರಿಕೆ ಸಾರ್ವಜನಿಕರ ಆತಂಕವನ್ನು ಎತ್ತಿ ಹಿಡಿದು ಎಚ್ಚರಿಕಾ ವರದಿ ಪ್ರಕಟಿಸಿತ್ತು.
ಈ ಹಿನ್ನಲೆಯಲ್ಲಿ ಪುರಸಭಾಧಿಕಾರಿಗಳು ತಕ್ಷಣ ಸ್ಪಂದಿಸಿದ್ದು, ಪುರಸಭೆಯ ಒಡೆದು ಹೋಗಿರುವ ಪೈಪ್ ಲೈನ್ ದುರಸ್ತಿಗೆ ಕ್ರಮ ಕೈಗೊಂಡು ಸಮಸ್ಯೆಗೆ ಪರಿಹಾರ ಒದಗಿಸುವ ಪ್ರಯತ್ನ ನಡೆಸಿದ್ದಾರೆ.
0 comments:
Post a Comment