ಬೆಂಗಳೂರು, ಜೂನ್ 14, 2023 (ಕರಾವಳಿ ಟೈಮ್ಸ್) : ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಫಲಿತಾಂಶ ಜೂನ್ 15 ರಂದು ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.
ಗುರುವಾರ ಬೆಳಗ್ಗೆ 9.30ಕ್ಕೆ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಳಗ್ಗೆ 11 ಗಂಟೆ ಬಳಿಕ ಕೆಇಎ ವೆಬ್ ಸೈಟ್ hಣಣಠಿ://ಞeಚಿ.ಞಚಿಡಿ.ಟಿiಛಿ.iಟಿ ನಲ್ಲಿ ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯವಾಗಲಿದೆ ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 20 ಮತ್ತು ಮೇ 21 ರಂದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಮುಂತಾದ ವಿವಿಧ ವೃತ್ತಿಪರ ಕೋರ್ಸುಗಳ ಸರಕಾರಿ ಸೀಟುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಿಇಟಿ ಪರಿಕ್ಷೆ ನಡೆದಿತ್ತು. ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಹಿಂದೆ ಜೂನ್ 12 ರಂದು ಸಿಇಟಿ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಸುಮಾರು 30 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ವಿವರಗಳಲ್ಲಿ ಹೊಂದಾಣಿಕೆಯಾಗದ ಕಾರಣ ಫಲಿತಾಂಶದ ದಿನಾಂಕವನ್ನು ಮೂಂದುಡಲಾಗಿತ್ತು.
0 comments:
Post a Comment