ಹಿಂದಿನ ಸರಕಾರಗಳ ಹಗರಣಗಳ ಬಗ್ಗೆ ಸೂಕ್ತ ತನಿಖೆ : ಸಿಎಂ ಸಿದ್ದರಾಮಯ್ಯ - Karavali Times ಹಿಂದಿನ ಸರಕಾರಗಳ ಹಗರಣಗಳ ಬಗ್ಗೆ ಸೂಕ್ತ ತನಿಖೆ : ಸಿಎಂ ಸಿದ್ದರಾಮಯ್ಯ - Karavali Times

728x90

27 June 2023

ಹಿಂದಿನ ಸರಕಾರಗಳ ಹಗರಣಗಳ ಬಗ್ಗೆ ಸೂಕ್ತ ತನಿಖೆ : ಸಿಎಂ ಸಿದ್ದರಾಮಯ್ಯ

ಬಿಜೆಪಿಗರಿಗೆ ಬದ್ದತೆ ಇದ್ದರೆ ಕೇಂದ್ರದ ಅನ್ನ ರಾಜಕೀಯದ ವಿರುದ್ದ ಖಂಡಿಸಲಿ

ನಮ್ಮ ಸರಕಾರ ಐದೂ ಗ್ಯಾರಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ 


ಬೆಂಗಳೂರು, ಜೂನ್ 27, 2023 (ಕರಾವಳಿ ಟೈಮ್ಸ್) : ಹಿಂದಿನ ಸರಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿನ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪಿಎಸ್‍ಐ ನೇಮಕಾತಿ ಹಗರಣ ಹಾಗೂ ಬಿಟ್ ಕಾಯಿನ್ ಹಗರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರು ತನಿಖೆಯನ್ನು ಕೈಗೊಳ್ಳಲಾಗುವುದು. ಅಂದಿನ ಆರೋಗ್ಯ ಸಚಿವ ಡಾ ಸುಧಾಕರ್ ಅವರು ದುರಂತದಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಸತ್ತವರ ಸಂಖ್ಯೆ ಮೂವತ್ತಕ್ಕೂ ಹೆಚ್ಚಿತ್ತು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದಿದ್ದಾರೆ.

ಕೊಟ್ಟ ಮಾತಿನಂತೆ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ. ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೋಜನೆಯನ್ನು ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರಕಾರದ ಅಧೀನದ ಎಫ್.ಸಿ.ಐ ಮೊದಲಿಗೆ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಪತ್ರ ಬರೆಸಿದ್ದಾರೆ. ಇದು ಕೇಂದ್ರ ಸರಕಾರದ ಷಡ್ಯಂತ್ರವಲ್ಲದೆ ಇನ್ನೇನು ಎಂದವರು ಪ್ರಶ್ನಿಸಿದ್ದಾರೆ. 

ನವದೆಹಲಿಗೆ ಭೇಟಿ ನೀಡಿದಾಗ ಎಫ್.ಸಿ.ಐ ನವರು ಅಕ್ಕಿ ನೀಡಲು ನಿರಾಕರಿಸಿರುವ ವಿಚಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇನೆ. ಕೇಂದ್ರದಿಂದ ಬಡವರ ಮೇಲೆ ಗದಾ ಪ್ರಹಾರ ಮಾಡಲಾಗಿದೆ ಎಂದ ಅವರು ಅನ್ನಭಾಗ್ಯವನ್ನು ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಆರ್. ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ ಎಂದು ಪ್ರಶ್ನಿಸಿದ ಸಿಎಂ 

ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ, ಎನ್.ಸಿ.ಸಿ.ಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು ಎಂದರು. 

ನಮ್ಮ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ? ಬಡವರು ತಿನ್ನುವ ಅನ್ನದ ವಿಷಯದಲ್ಲಿ ರಾಜಕೀಯ ಗಿಮಿಕ್ ಮಾಡಲು ಹೋಗಬಾರದು. ಬಿಜೆಪಿಯವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರಕಾರದಿಂದ ಅಕ್ಕಿ ಕೊಡಿಸಲಿ ಎಂದು ಸವಾಲೆಸೆದಿದ್ದಾರೆ. 

2022-23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪೆÇ್ಲಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪೆÇ್ಲಮಾ ಮಾಡಿದವರಿಗೆ 1500 ರೂಪಾಯಿಗಳನ್ನು 24 ತಿಂಗಳು ನೀಡಲಾಗುವುದು ಎಂದ ಮುಖ್ಯಮಂತ್ರಿ 2.50 ಲಕ್ಷ ಖಾಲಿ ಹುದ್ದೆಗಳನ್ನು ಒಂದೇ ಸಲಕ್ಕೆ ಭರ್ತಿ ಮಾಡಲಾಗಲ್ಲ. ಹಂತ ಹಂತವಾಗಿ ಭರ್ತಿ ಮಾಡುತ್ತೇವೆ. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂಪಾಯಿ ಬೇಕಾಗಿದೆ. ಈ ಹಣವನ್ನು ಖರ್ಚು ಮಾಡಲು ನಾವು ಸಿದ್ದರಿದ್ದು ನಮ್ಮ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದು ಘೋಷಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಹಿಂದಿನ ಸರಕಾರಗಳ ಹಗರಣಗಳ ಬಗ್ಗೆ ಸೂಕ್ತ ತನಿಖೆ : ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top