ಬಂಟ್ವಾಳ, ಜೂನ್ 07, 2023 (ಕರಾವಳಿ ಟೈಮ್ಸ್) : ಭಾರತ ದೇಶದ ಸಂವಿಧಾನದ ಜ್ಞಾನವು ಪ್ರತಿಯೊಬ್ಬರಿಗೂ ಇರಬೇಕಾಗಿದೆ. ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ಅರಿವಿದ್ದರೆ ಈ ದೇಶವು ಉನ್ನತ ಮಟ್ಟಕ್ಕೇರಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಂವಿಧಾನದ ಅರಿವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ನಿಟ್ಟಿನಲ್ಲಿ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಪ್ರತೀ ದಿನ ಓದಿಸಲು ಸೂಕ್ತ ಆದೇಶವನ್ನು ಮಾಡಬೇಕಾಗಿ ಒತ್ತಾಯಿಸಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ರಾಜ್ಯ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರಿಗೆ ಸಂಘಟನೆ ಮುಖಂಡರಿಂದ ಬುಧವಾರ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಕರ್ನಾಟಕ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಉಪನಿರ್ದೇಶಕ ರಾಜಾ ಚೆಂಡ್ತಿಮಾರ್, ಸಿಪಿಐಎಂಎಲ್ ಜಿಲ್ಲಾ ಮುಖಂಡ ರಾಮಣ್ಣ ವಿಟ್ಲ ಮೊದಲಾವರಿದ್ದರು.
0 comments:
Post a Comment