ಮಂಗಳೂರು, ಜೂನ್ 06, 2023 (ಕರಾವಳಿ ಟೈಮ್ಸ್) : ರಾಜ್ಯದ ಗೃಹಮಂತ್ರಿ ಡಾ ಜಿ ಪರಮೇಶ್ವರ್ ಅವರು ಮಂಗಳವಾರ ಮಂಗಳೂರಿನ ಪಶ್ಚಿಮ ವಲಯ ಪೊಲೀಸ್ ಉಪ ಮಹಾನೀರೀಕ್ಷಕರ ಕಛೇರಿಗೆ ಭೇಟಿ ನೀಡಿ, ಸದರಿ ವಲಯ ವ್ಯಾಪ್ತಿಯ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪೊಲೀಸ್ ಅಧೀಕ್ಷಕರುಗಳೊಂದಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ, ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಪಶ್ಚಿಮ ವಲಯ ಪೊಲೀಸ್ ಉಪ ಮಹಾನೀರೀಕ್ಷಕ ಡಾ ಚಂದ್ರಗುಪ್ತ ಭಾಗವಹಿಸಿದ್ದರು.
0 comments:
Post a Comment