ಬಂಟ್ವಾಳ, ಜೂನ್ 21, 2023 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಬಿ ಸಿ ರೋಡು ಸಮೀಪದ ಪರ್ಲಿಯ-ಮದ್ದ ಬಳಿ ಮುಖ್ಯ ರಸ್ತೆಯಲ್ಲಿ ಕಳೆದ ಮೂರು ದಿನಗಳಿಂದ ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿರುವ ದೃಶ್ಯ ಕಂಡು ಬರುತ್ತಿದ್ದು, ತಕ್ಷಣ ಸರಿಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಮಳೆ ಕಡಿಮೆ ಇರುವುದರಿಂದ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ರೀತಿ ನೀರು ಪೋಲಾಗುತ್ತಿರುವುದರಿಂದ ಸಮಸ್ಯೆ ಜಟಿಲವಾಗುವ ಬಗ್ಗೆ ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಪುರಸಭಾ ಆಡಳಿತ ಪಕ್ಷದ ಜನಪ್ರತಿನಧಿಗಳೇ ಈ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದು, ನಿತ್ಯವೂ ಇದೇ ರಸ್ತೆಯಲ್ಲೇ ಸಂಚರಿಸುತ್ತಿದ್ದರೂ ಮೂರು ದಿನಗಳಿಂದ ನೀರು ಪೋಲಾಗುವ ಬಗ್ಗೆ ಇದುವರೆಗೂ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎನ್ನುವ ಸ್ಥಳೀಯರು ಈ ಪ್ರದೇಶದಲ್ಲಿ ಇನ್ನೂ ಹಲವಾರು ಮೂಲಭೂತ ಸಮಸ್ಯೆಗಳಿದ್ದರೂ ಇಲ್ಲಿನ ಜನಪ್ರತಿನಿಧಿಗಳು ಇದ್ಯಾವುದೂ ತಮಗೆ ಸಂಬಂಧಪಟ್ಟದ್ದೇ ಅಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಕೂಡಾ ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ಚುನಾವಣೆ ವೇಳೆಗೆ ತಕ್ಕ ಪಾಠ ಕಲಿಸುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.
0 comments:
Post a Comment