ಬಂಟ್ವಾಳ, ಜೂನ್ 12, 2023 (ಕರಾವಳಿ ಟೈಮ್ಸ್) : ಕಾಂಗ್ರೆಸ್ ಸರಕಾರ ಹಿಂದಿನಿಂದಲೂ ಬಡವರ ಪರವಾಗಿ ಕೆಲಸ ಮಾಡಿದ ಹೆಗ್ಗಳಿಕೆ ಉಳಿಸಿಕೊಂಡಿದೆ. ಬಡವರಿಗಾಗಿ ಕೆಲಸ ಮಾಡಿದರೂ ಕೆಲವೊಂದು ಅಪಪ್ರಚಾರದಿಂದ ಅನ್ಯ ಪಕ್ಷಗಳು ಕೆಲವೊಮ್ಮೆ ಕಾಂಗ್ರೆಸ್ಸಿನಿಂದ ಅಧಿಕಾರ ಕಸಿದುಕೊಂಡರೂ ಯಾವುದೇ ಕಾಂಗ್ರೆಸ್ಸೇತರ ಪಕ್ಷಗಳಿಗೂ ಬಡವರ ಪರ ಕೆಲಸ ಮಾಡಿಕೊಂಡು ಅಧಿಕಾರ ಉಳಿಸಿಕೊಳ್ಳುವ ಯೋಗ್ಯತೆ ಉಳಿದುಕೊಂಡಿಲ್ಲ. ಜನ ಮತ್ತೆ ಕಾಂಗ್ರೆಸ್ಸಿನ ಜನಪರ ಕೆಲಸ-ನೀತಿಗಳಿಗಾಗಿಯೇ ಕಾಂಗ್ರೆಸ್ಸಿಗೆ ಮರಳಿ ಅಧಿಕಾರ ನೀಡುತ್ತಿದ್ದಾರೆ ಹೊರತು ಇತರ ಯಾವುದೇ ಆಸೆ-ಆಮಿಷ, ಪ್ರಭಾವಗಳಿಂದಲ್ಲ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದರು.
ರಾಜ್ಯದ ನೂತನ ಕಾಂಗ್ರೆಸ್ ಸರಕಾರ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿಗಳ ಪೈಕಿ ಮೊದಲ ಗ್ಯಾರಂಟಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿರುವ ಹಿನ್ನಲೆಯಲ್ಲಿ ಭಾನುವಾರ ಬಿ ಸಿ ರೋಡಿನಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನಪರ ಕೆಲಸದ ಮೇಲೆ ವಿಶ್ವಾಸವಿಟ್ಟು ಅಧಿಕಾರ ನೀಡಿದ ಮತದಾರರ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕಾಂಗ್ರೆಸ್ ಸರಕಾರಗಳು ಸದಾ ನಡೆದುಕೊಂಡು ಬಂದಿದ್ದು, ಈ ಬಾರಿಯೂ ರಾಜ್ಯದಲ್ಲಿ ಅಭೂತಪೂರ್ವವಾಗಿ ಜಯಭೇರಿ ಭಾರಿಸಿ ಅಧಿಕಾರಕ್ಕೇರಿದ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ, ಬಡವರಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಸದಾ ಶ್ರೀಮಂತರ ಪರವಾಗಿ ಮಾತ್ರ ಕೆಲಸ ಮಾಡಿಕೊಂಡು ಬಂದಿದ್ದು, ಬಡವರ ಏಳಿಗೆಗಾಗಿ ಕನಿಷ್ಠ ಕಾರ್ಯಕ್ರಮಗಳನ್ನೂ ಹಮ್ಮಿಕೊಂಡಿಲ್ಲ. ಮತದಾರರಿಗೆ ಚುನಾವಣೆ ಸಂದರ್ಭ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರದ ಬಿಜೆಪಿ ಸರಕಾರ ವಿಫಲವಾಗಿದೆ. ನುಡಿದಂತೆ ನಡೆಯುವ ಬದ್ದತೆ ಇರುವ ಸರಕಾರ ಇದ್ದರೆ ಅದು ಕಾಂಗ್ರೆಸ್ ನೇತೃತ್ವದ ಸರಕಾರ ಮಾತ್ರ ಎಂದವರು ಹೇಳಿದರು.
ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಬಂಟ್ವಾಳ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಲವಿನಾ ವಿಲ್ಮಾ ಮೋರಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಪಕ್ಷ ಪ್ರಮುಖರಾದ ಎಂ ಅಶ್ವನಿ ಕುಮಾರ್ ರೈ, ಸುದರ್ಶನ್ ಜೈನ್, ಫೆÇ್ಲೀಸಿ ಡಿ’ಸೋಜಾ, ಮಂಜುಳಾ ಸದಾನಂದ, ಮಂಜುಳಾ ಕುಶಾಲಪ್ಪ ಗೌಡ, ಮಲ್ಲಿಕಾ ಶೆಟ್ಟಿ, ಜಗದೀಶ್ ಕೊಯಿಲ, ಪ್ರವೀಣ್ ರೋಡ್ರಿಗಸ್, ಪ್ರವೀಣ್ ಬಂಟ್ವಾಳ, ಬಿ ಎಂ ಅಬ್ಬಾಸ್ ಆಲಿ, ಉಮೇಶ್ ಬೋಳಂತೂರು, ಉಮೇಶ್ ನಾಯಿಲ, ವಿಜಯ ಅಲ್ಲಿಪಾದೆ, ಧನಲಕ್ಷ್ಮೀ ಬಂಗೇರ, ವಿಜಯ ಶೆಟ್ಟಿ, ಭಾರತೀ ರಾಜೇಂದ್ರ, ಧನವಂತಿ ಬಂಗೇರ ಮೊದಲಾದವರು ಭಾಗವಹಿಸಿದ್ದರು.
ಬಳಿಕ ಶಕ್ತಿ ಯೋಜನೆಯಡಿ ಕೆಎಸ್‍ಆರ್‍ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಗುಲಾಬಿ ಹೂ ಹಾಗೂ ಸಿಹಿ ತಿಂಡಿ ವಿತರಿಸಲಾಯಿತು.
0 comments:
Post a Comment