ರಾಕೇಶ್ ಕುಮಾರ್, ಪದವಿ ವಿದ್ಯಾರ್ಥಿ
ಬಸ್ ಪಾಸಿನ ಉಪಯೋಗವನ್ನು ಅದೆಷ್ಟು ವರ್ಷಗಳಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಡೆಯುತ್ತಾ ಬಂದಿರುತ್ತಾರೆ. ಆದರೆ ಈಗಿನ ಸರಕಾರ ತಂದಿರುವಂತಹ ಶಕ್ತಿ ಯೋಜನೆಯನ್ನು ಕೇವಲ ವಿದ್ಯಾರ್ಥಿನಿಯರು ಮಾತ್ರ ಉಚಿತ ಪ್ರಯಾಣವನ್ನು ಮಾಡಲು ಅವಕಾಶವನ್ನು ನೀಡಿದೆ. ಇದು ಉತ್ತಮ ಬೆಳವಣಿಗೆ ಆದರೆ ಈ ಯೋಜನೆಯನ್ನು ವಿದ್ಯಾರ್ಥಿಗಳು ಕೂಡ ಪಡೆಯುವಂತೆ ಆಗಿದ್ದರೆ ಇನ್ನು ಕೂಡ ಹೆಚ್ಚಿನ ಉಪಯೋಗ ಆಗುತ್ತಿತ್ತು.
ಒಂದರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕೊಡಬೇಕಾಗಿ ವಿನಂತಿಸುತ್ತಿದ್ದೇನೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿದ್ದರೆ ಹಲವಾರು ವಿದ್ಯಾರ್ಥಿಗಳು ಅದರ ಲಾಭವನ್ನು ಪಡೆದುಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರ ಬರುತ್ತಾರೆ. ತೀವ್ರ ಬಡತನದಿಂದಾಗಿ ಕೆಲವು ವಿದ್ಯಾರ್ಥಿಗಳು ಶಿಕ್ಷಣವನ್ನು ತ್ಯಾಗ ಮಾಡುತ್ತಾರೆ. ಕೆಲವು ಕಡೆಗಳಲ್ಲಿ ಶಾಲೆಗಳು 30 ಕಿಲೋಮೀಟರ್ ಅಷ್ಟು ದೂರವಿದ್ದು ಶಾಲೆಗೆ ಹೋಗಲು ಅನಾನುಕೂಲವಾಗುತ್ತದೆ. ಇಲ್ಲದಿದ್ದರೆ ಹಣ ಕೊಟ್ಟು ಪ್ರಯಾಣ ಮಾಡಲು ಕಷ್ಟಪಡುವವರು ಅನೇಕರು ಇದ್ದಾರೆ. 14 ವರ್ಷದಿಂದ ಮೇಲ್ಪಟ್ಟ ಮಕ್ಕಳಿಗೆ ಕೆಲಸಕ್ಕೆ ಹೋಗಲು ಆಗುವುದಿಲ್ಲ. ತಂದೆ-ತಾಯಿಯನ್ನು ಅವಲಂಬಿಸಬೇಕಾಗುತ್ತದೆ. ಉದಾಹರಣೆಗೆ ಅಮೆರಿಕದಲ್ಲಿ ಚಿಕ್ಕ ವಿದ್ಯಾರ್ಥಿಗಳಿಂದ ದೊಡ್ಡ ವಿದ್ಯಾರ್ಥಿಗಳಿಗೆ ಉಚಿತ ಬಸ್ಸಿನಲ್ಲಿ ಪ್ರಯಾಣ ಮಾಡಲು ಅವಕಾಶವನ್ನು ಕೊಟ್ಟಿದೆ.
ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಮುಂದುವರೆದಿದ್ದಾರೆ. ಉಚಿತ ಬಸ್ ಪಾಸ್ ಕೊಡುವುದರಿಂದ ಸ್ವಲ್ಪ ಆದರೂ ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚಾಗಬಹುದು. ಕರ್ನಾಟಕದಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಕೊಟ್ಟು ವಿದ್ಯಾರ್ಥಿಗಳಿಗೆ ಕೊಡದಿದ್ದರೆ ಅದು ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡಿದಂತಾಗುತ್ತದೆ. ಪದವಿ ವಿದ್ಯಾರ್ಥಿಗಳಿಗೆ ಬಸ್ ಪಾಸಿನ ದರವನ್ನು ಕಡಿಮೆ ಮಾಡಬೇಕು ಎಂದು ವಿನಂತಿಸುತ್ತಿದ್ದೇನೆ. ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯನ್ನು ನೀಡಿರುವುದರಿಂದ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಆದ್ದರಿಂದ ಕೆಲವೊಂದು ಊರಿಗೆ ಬಸ್ಸಿನ ಸಂಖ್ಯೆಯನ್ನು ಹೆಚ್ಚು ಮಾಡಬೇಕೆಂದು ವಿನಂತಿ.
0 comments:
Post a Comment