ಬಂಟ್ವಾಳ, ಜೂನ್ 23, 2023 (ಕರಾವಳಿ ಟೈಮ್ಸ್) : ರಾಜ್ಯ ಆರೋಗ್ಯ ಸಚಿವರೂ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆದ ದಿನೇಶ್ ಗುಂಡೂರಾವ್ ಅವರು ಶುಕ್ರವಾರ (ಜೂ 23) ಮಾಜಿ ಸಚಿವ ಬಿ ರಮಾನಾಥ ರೈ ಅವರ ಬಂಟ್ವಾಳ-ಕಳ್ಳಿಗೆಯ ನಿವಾಸಕ್ಕೆ ಭೇಟಿ ನೀಡಿದರು.
ಈ ವೇಳೆ ಸಚಿವರನ್ನು ಗೌರವದಿಂದ ಸ್ವಾಗತಿಸಿದ ರಮಾನಾಥ ರೈ ಅವರು ಸಚಿವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ವಿಚಾರಗಳ ಬಗ್ಗೆ ಹಾಗೂ ಕುಶಲೋಪರಿ ವಿಚಾರ ವಿನಿಮಯ ಮಾಡಿಕೊಂಡರು.
ಈ ಸಂದರ್ಭ ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ್ ಜೈನ್, ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಬಿ ಎಂ ಅಬ್ಬಾಸ್ ಅಲಿ, ಮಾಯಿಲಪ್ಪ ಸಾಲ್ಯಾನ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಶಬೀರ್ ಸಿದ್ದಕಟ್ಟೆ, ಪ್ರಮುಖರಾದ ಮಿಥುನ್ ರೈ, ಸಂಜೀವ ಪೂಜಾರಿ, ಸುರೇಶ್ ನಾವೂರು, ಜನಾರ್ದನ ಚೆಂಡ್ತಿಮಾರ್, ಸುರೇಶ್ ಜೋಡಾ, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ ಮೊದಲಾದವರು ಜೊತೆಗಿದ್ದರು.
0 comments:
Post a Comment