ಮಂಗಳೂರು, ಜೂನ್ 29, 2023 (ಕರಾವಳಿ ಟೈಮ್ಸ್) : ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 10 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ಅಲ್ಲಲ್ಲಿ ಅತಿ ಹೆಚ್ಚು 244.4 ಮಿ ಮೀ ಮಳೆಯೊಂದಿಗೆ ಕರಾವಳಿ ಜಿಲ್ಲೆಯಲ್ಲಿ 64 ಮಿ.ಮೀ ನಿಂದ 115 ಮಿ. ಮೀ. ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳ ವಿವಿಧೆಡೆ ಮಿಂಚು ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯು ಹೆಚ್ಚಿನ ಉಬ್ಬರವಿಳಿತದೊಂದಿಗೆ ಹೊಂದಿಕೆಯಾಗಬಹುದು, ಇದರ ಪರಿಣಾಮವಾಗಿ ತಗ್ಗು ಪ್ರದೇಶಗಳು ಜಲಾವೃತ ಮತ್ತು ಪ್ರವಾಹಕ್ಕೆ ಕಾರಣವಾಗಬಹುದು. ಅಗತ್ಯ ಪರಿಸ್ಥಿತಿಯನ್ನು ನಿಭಾಯಿಸಲು ಮುಂಚಿತವಾಗಿ ಡಿ-ವಾಟರಿಂಗ್ ಪಂಪ್‍ಗಳು ಮತ್ತು ಇತರ ಉಪಕರಣಗಳನ್ನು ನಿಯೋಜಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.
ಮಳೆ ಸಂದರ್ಭ ಯಾವುದೇ ಅನಾಹುತ ತಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಮತ್ತು ರಾಜ್ಯ ಡಿಆರ್‍ಎಫ್ ಸಿಬ್ಬಂದಿಗಳನ್ನು ದುರ್ಬಲ ಪ್ರದೇಶಗಳಲ್ಲಿ ನಿಯೋಜಿಸಲು ಸಂಬಂಧಿಸಿದ ಆಡಳಿತಕ್ಕೆ ಸೂಚಿಸಲಾಗಿದೆ. ಕರಾವಳಿಯಲ್ಲಿ ಜುಲೈ 2 ರವರೆಗೆ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
0 comments:
Post a Comment