ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ - Karavali Times ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ - Karavali Times

728x90

15 July 2023

ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು, ಜುಲೈ 15, 2023 (ಕರಾವಳಿ ಟೈಮ್ಸ್) : ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 19 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗುವುದು. ಗೃಹಲಕ್ಷ್ಮೀ ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಅಗತ್ಯ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ ಎಂದವರು ಹೇಳಿದರು. 

ಪ್ರಜಾಪ್ರತಿ£ಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುವುದು. ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ ಮಂಜೂರಾತಿ ಸಂದೇಶ ರವಾನೆ ಮಾಡಲಾಗುತ್ತದೆ. ಫಲಾನುಭವಿಯ ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆ ಮಾಡುತ್ತೇವೆ. ಬೇರೆ ಖಾತೆಗೆ ಆರ್‍ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗುತ್ತದೆ. ನೋಂದಣಿಗೆ ಯಾವುದೇ ಶುಲ್ಕ, ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿಪಡಿಸಿಲ್ಲ ಎಂದವರು ಸ್ಪಷ್ಟಪಡಿಸಿದರು. 

ಸೋಮವಾರ (ಜುಲೈ 17) ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು, ಯೋಜನೆ ಉದ್ಘಾಟಿಸಲು ಕೇಂದ್ರ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ, ನಾಯಕರು ಒಪ್ಪಿಗೆ ಕೊಟ್ಟರೆ ಆಗಸ್ಟ್ 17 ರಂದೇ ಖಾತೆಗೆ ಹಣ ವರ್ಗಾವಣೆಯಾಗಲಿದೆ, ಇಲ್ಲದಿದ್ದರೇ ಆಗಸ್ಟ್ 19ಕ್ಕೆ ಹಣ ಜಮಾವಣೆಯಾಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. 

ಗೃಹಲಕ್ಷ್ಮೀ ಯೋಜನೆಗೆ ರಾಷ್ಟ್ರೀಯ ನಾಯಕರಿಂದ ಚಾಲನೆ ನೀಡಲಾಗುವುದು. ರಾಷ್ಟ್ರೀಯ ನಾಯಕರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ನಾಯಕರು ಒಪ್ಪಿಕೊಂಡರೆ 17ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಉದ್ಘಾಟನೆ ಮಾಡಲಾಗುವುದು. ಸೋನಿಯಾ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ. ರಾಷ್ಟ್ರೀಯ ನಾಯಕರ ನಿರ್ಧಾರ ಶನಿವಾರವೇ ಖಚಿತವಾಗುತ್ತದೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸಮಯ ನೀಡಲಿಲ್ಲ ಅಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜುಲೈ 19ರಂದು ಚಾಲನೆ ನೀಡಲಾಗುವುದು ಎಂದ ಸಚಿವೆ ಹೆಬ್ಬಾಳ್ಕರ್ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ, ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2 ಸಾವಿರ ರೂಪಾಯಿ ನೇರವಾಗಿ ಜಮೆಯಾಗಲಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Rating: 5 Reviewed By: karavali Times
Scroll to Top