ಬಂಟ್ವಾಳ, ಜುಲೈ 08, 2023 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಸಮೀಪದ ನಂದಾವರ ಗುಂಪುಮನೆ ಎಂಬಲ್ಲಿ ಶುಕ್ರವಾರ (ಜುಲೈ 7) ಮುಂಜಾನೆ ಮನೆಯೊಂದರ ಮೇಲೆ ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶನಿವಾರ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ಬೇಟಿ ನೀಡಿ ಆರೋಗ್ಯ ವಿಚಾರಿಸಿದರು. ಘಟನೆ ನಡೆದ ಸಂದರ್ಭ ಬೆಂಗಳೂರಿನಲ್ಲಿ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿದ್ದ ಶಾಸಕರು ಶನಿವಾರ ಕ್ಷೇತ್ರಕ್ಕೆ ಆಗಮಿಸಿ ಸಂತ್ರಸ್ತರನ್ನು ಭೇಟಿಯಾದರು.
ಘಟನೆಯಲ್ಲಿ ಸಫಾಳ ತಾಯಿ ಝರೀನಾ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕ ನೆಲೆಯಲ್ಲಿ ಭರಿಸುವುದಾಗಿ ಇದೇ ವೇಳೆ ಕುಟುಂಬಿಕರಿಗೆ ಭರವಸೆ ನೀಡಿದರು ಹಾಗೂ ಸರಕಾರದಿಂದ ಸಿಗಬೇಕಾದ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.
0 comments:
Post a Comment