ಬಂಟ್ವಾಳ, ಜುಲೈ 01, 2023 (ಕರಾವಳಿ ಟೈಮ್ಸ್) : ಮಳೆ ಆರಂಭವಾಗಿರುವ ಹಿನ್ನಲೆಯಲ್ಲಿ ಮಳೆ ಹಾನಿ ಹಾಗೂ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸಹಕಾರವಾಗುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ ಈ ಹಿಂದೆ 08255-230202 ಎಂದು ಪ್ರಕಟಿಸಲಾಗಿತ್ತು. ಆದರೆ ಇದೀಗ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ ಬದಲಾಗಿದ್ದು, 08255-232500 ಸಂಖ್ಯೆಗೆ ಸಾರ್ವಜನಿಕರು ಮಳೆ ಹಾಗೂ ಪ್ರಾಕೃತಿಕ ಹಾನಿಗೆ ಸಂಬಂಧಿಸಿದಂತೆ ತುರ್ತು ಸೇವೆಗಳಿಗೆ ಸಂಪರ್ಕಿಸಿ ಸದುಪಯೋಗ ಪಡೆದುಕೊಳ್ಳಬಹುದು ಎಂದು ಬಂಟ್ವಾಳ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.
1 July 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment