ಬಂಟ್ವಾಳ, ಜುಲೈ 07, 2023 (ಕರಾವಳಿ ಟೈಮ್ಸ್) : 2023-2024ನೇ ಸಾಲಿನ ಕರ್ನಾಟಕ ರಾಜ್ಯ ಸರಕಾರದ ಬಜೆಟ್ ಮಂಡನೆಯಿಂದ ರಾಜ್ಯ ಪ್ರಗತಿಯನ್ನು ಸಾಧಿಸಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅಭಿಪ್ರಾಯಪಟ್ಟಿದ್ದಾರೆ.
ಬಜೆಟ್ ಮಂಡನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, 2023-2024ನೇ ಸಾಲಿನಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ವಿದ್ಯೆ, ಉದ್ಯೋಗ, ಆರೋಗ್ಯ, ಶೋಷಿತ ಹಾಗೂ ಅಲ್ಪಸಂಖ್ಯಾತರ, ಹಿಂದುಳಿದ ವರ್ಗ, ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಿಂದ ರಾಜ್ಯ ಮತ್ತಷ್ಟು ಸುಭಿಕ್ಷೆಯನ್ನು ಸಾಧಿಸಲಿದೆ ಎಂದವರು ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಇನ್ನಷ್ಟು ಅಭಿವೃದ್ದಿಪರ ಯೋಜನೆಗಳನ್ನು ರಾಜ್ಯದ ಜನತೆಗೆ ಬಜೆಟ್ ಮೂಲಕ ನೀಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.
0 comments:
Post a Comment