ಮಂಗಳೂರು, ಜುಲೈ 05, 2023 (ಕರಾವಳಿ ಟೈಮ್ಸ್) : ಸರಕಾರದಿಂದ ದೊರೆಯುವ ವೃದ್ದಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ ವೇತನ, ಮೈತ್ರಿ, ಮನಸ್ವಿನಿ ಹಾಗೂ ಇತರ ಮಾಸಿಕ ಪಿಂಚಣಿ, ಕಿಸಾನ್ ಸಮ್ಮಾನ್ ಸಹಿತ ಇತರ ಯೋಜನೆಗಳ ನೇರ ನಗದು ವರ್ಗಾವಣೆಗಾಗಿ ಅಂಚೆ ಕಚೇರಿಗಳಲ್ಲಿ ಡಿ ಕ್ಯೂಬ್ ಆಧಾರ್ ಸೀಡಿಂಗ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಎಲ್ಲಾ ಅಂಚೆ ಕಚೇರಿಗಳಲ್ಲಿ ಈ ಅಭಿಯಾನ ನಡೆಯುತ್ತಿದ್ದು, ಅಂಚೆ ಕಚೇರಿಗಳಲ್ಲಿ ಖಾತೆ ಹೊಂದಿರುವ ಫಲಾನುಭವಿಗಳು ತಮ್ಮ ಅಂಚೆ ಎಸ್ ಬಿ ಖಾತೆಗಳಿಗೆ ಆಧಾರ್ ಸೀಡಿಂಗ್ ಮಾಡಿಸಿಕೊಳ್ಳುವಂತೆ ಅಂಚೆ ಇಲಾಖೆ ಪ್ರಕಟಣೆ ತಿಳಿಸಿದೆ.
0 comments:
Post a Comment