ಮಂಗಳೂರು, ಜುಲೈ 24, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ ಒಂದೆರಡು ದಿನಗಳ ಕಾಲ ಕೂಡಾ ಮಳೆ ಬಿರುಸು ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಜಿಲ್ಲಾಡಳಿತ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಜುಲೈ 25 ರಂದು ಮಂಗಳವಾರ (ನಾಳೆ) ಜಿಲ್ಲಾ ವ್ಯಾಪ್ತಿಗೆ ಬರುವಂತೆ ಅಂಗನವಾಡಿ, ಶಾಲೆ, ಪಿಯು ಕಾಲೇಜು ಹಾಗೂ ಪದವಿ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.
ಮಳೆ ಹಾಗೂ ವಿಪತ್ತು ನಿರ್ವಹಣೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು ಮಳೆ ಹಾಗೂ ವಿಪತ್ತಿಗೆ ಸಂಬಂಧಪಟ್ಟಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಡೀಸಿ ಸೂಚಿಸಿದ್ದಾರೆ.
0 comments:
Post a Comment