ಬಂಟ್ವಾಳ, ಜುಲೈ 10, 2023 (ಕರಾವಳಿ ಟೈಮ್ಸ್) : ತಾಲೂಕಿನ ಕಾವಳಮೂಡೂರು ಗ್ರಾಮದ ಕಲ್ಮಂಜ ನಿವಾಸಿ ಕಮಲ ಎಂಬವರಿಗೆ ವಗ್ಗ ಕುಲಾಲ ಸಮಾಜ ಸೇವಾ ಸಂಘದ ಸಹಭಾಗಿತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದಿಂದ ನಿರ್ಮಿಸಲಾದ ಕುಂಭ ಕುಠೀರದ ಗೃಹಪ್ರವೇಶ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್, ಮಾಜಿ ಸಚಿವ ಬಿ ರಮಾನಾಥ ರೈ, ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಅಣ್ಣಯ್ಯ ಕುಲಾಲ್, ವಗ್ಗ ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ಪುರುಷೋತ್ತಮ ಕುಲಾಲ್, ಜಿ ಪಂ ಮಾಜಿ ಸದಸ್ಯರಾದ ಬಿ ಪದ್ಮಶೇಖರ ಜೈನ್, ತುಂಗಪ್ಪ ಬಂಗೇರ, ಕುಲಾಲ ಯುವ ವೇದಿಕೆ ಜಿಲ್ಲಾಧ್ಯಕ್ಷ ಸುಕುಮಾರ ಬಂಟ್ವಾಳ ಭಾಗವಹಿಸಿ ಶುಭ ಹಾರೈಸಿದರು.
ಇದೇ ವೇಳೆ ಕುಟೀರ ನಿರ್ಮಾಣದ ರೂವಾರಿಗಳಾದ ವಗ್ಗ ಕುಲಾಲ ಸಂಘದ ಸ್ಥಾಪನಾ ಸಮಿತಿಯ ಸದಸ್ಯರಾದ ಸದಾಶಿವ ವಗ್ಗ ಮತ್ತು ನಾರಾಯಣ ಇಜ್ಜದೋಡಿ ಅವರನ್ನು ಸನ್ಮಾನಿಸಲಾಯಿತು. ಮನೆ ನಿರ್ಮಾಣಕ್ಕಾಗಿ ಸಹಕಾರ ನೀಡಿದ ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರನ್ನು ಗೌರವಿಸಲಾಯಿತು.
0 comments:
Post a Comment