ಬೆಂಗಳೂರು, ಜುಲೈ 06, 2023 (ಕರಾವಳಿ ಟೈಮ್ಸ್) : ಬಿಜೆಪಿ ಸರಕಾರದ ಅವಧಿಯಲ್ಲಿ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಶಾಫಿ ಸಅದಿ ನಂದಾವರ ಅವರು ಸರಕಾರ ಬದಲಾದ ಹಿನ್ನಲೆಯಲ್ಲಿ ಬುಧವಾರ ವಕ್ಫ್ ಅಧ್ಯಕ್ಷಗಿರಿಗೆ ರಾಜೀನಾಮೆ ಸಲ್ಲಿಸಿದ್ದು, ಸರಕಾರ ಅವರ ರಾಜೀನಾಮೆಯನ್ನು ತಕ್ಷಣ ಅಂಗೀಕರಿಸಿದೆ.
ಶಾಫಿ ಸಅದಿ ಅವರನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ವಕ್ಫ್ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿತ್ತು. ನೂತನ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಶಾಫಿ ಸಅದಿ ಮತ್ತು ಸದಸ್ಯರಾದ ಮೀರ್ ಅಜರ್ ಹುಸೇನ್, ಜಿ ಯಾಕೂಬ್ ಮತ್ತು ಐಎಎಸ್ ಅಧಿಕಾರಿ ಜೆಹೆರಾ ನಸೀಮ್ ಅವರ ನಾಮನಿರ್ದೇಶನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ರಾಜ್ಯ ಸರಕಾರ ಮೇ 22 ರಂದು ಆದೇಶ ಹೊರಡಿಸಿತ್ತು. ಆದರೆ ಬಳಿಕ ಒಂದೇ ದಿನದ ಅಂತರದಲ್ಲಿ ಸರಕಾರ ಈ ಆದೇಶವನ್ನು ತಡ ಹಿಡಿದಿತ್ತು. ಇದೀಗ ಶಾಫಿ ಸಅದಿ ಅವರು ರಾಜೀನಾಮೆ ನೀಡಿದ್ದಾರೆ.
0 comments:
Post a Comment