ರಾಜ್ಯದಲ್ಲಿ ನಡೆದ ಎಲ್ಲ ಕೊಲೆ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದೆ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಜಾರಿಯಾಗುವಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಸಮರ್ಥವಾಗಿದೆ : ಸಿಎಂ ಸಿದ್ದರಾಮಯ್ಯ - Karavali Times ರಾಜ್ಯದಲ್ಲಿ ನಡೆದ ಎಲ್ಲ ಕೊಲೆ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದೆ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಜಾರಿಯಾಗುವಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಸಮರ್ಥವಾಗಿದೆ : ಸಿಎಂ ಸಿದ್ದರಾಮಯ್ಯ - Karavali Times

728x90

13 July 2023

ರಾಜ್ಯದಲ್ಲಿ ನಡೆದ ಎಲ್ಲ ಕೊಲೆ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದೆ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಜಾರಿಯಾಗುವಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಸಮರ್ಥವಾಗಿದೆ : ಸಿಎಂ ಸಿದ್ದರಾಮಯ್ಯ

 ಬೆಂಗಳೂರು, ಜುಲೈ 13, 2023 (ಕರಾವಳಿ ಟೈಮ್ಸ್) : ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ. ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂಡಿ ಹಾಗೂ ಸಿಇಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಮಾಧ್ಯಮಗಳಿಗೆ ಪ್ರತಿಕ್ರಯಿಸಿದ ಅವರು ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೆÇಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ ಎಂದ ಅವರು ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ ಎಂದಿದ್ದಾರೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದಲ್ಲಿ ನಡೆದ ಎಲ್ಲ ಕೊಲೆ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದೆ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಜಾರಿಯಾಗುವಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಸಮರ್ಥವಾಗಿದೆ : ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top