ಬಂಟ್ವಾಳ, ಆಗಸ್ಟ್ 29, 2023 (ಕರಾವಳಿ ಟೈಮ್ಸ್) : ಅಪರಿಚಿತ ವ್ಯಕ್ತಿಯೋರ್ವ ಮಹಿಳೆ ತನ್ನ ಮನೆಯ ಸ್ನಾಗೃಹದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮೊಬೈಲ್ ಮೂಲಕ ಸೆರೆ ಹಿಡಿದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನಿವಾಸಿ ಮಹಿಳೆ ಠಾಣೆಗೆ ದೂರು ನೀಡಿದ್ದು, ಸೋಮವಾರ ರಾತ್ರಿ ಮಹಿಳೆ ಎಂದಿನಂತೆ ತಮ್ಮ ಮನೆಯ ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿರುವ ಸಂದರ್ಭ ಮನೆಯ ಹೊರಗಡೆಯಿಂದ ಗೋಡೆಯ ಸೆರೆಯ ಮಧ್ಯೆ ಮೊಬೈಲ್ ಮೂಲಕ ಸ್ನಾನ ಮಾಡುವ ದೃಶ್ಯ ಸೆರೆ ಹಿಡಿಯುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ಮಹಿಳೆ ಬೊಬ್ಬೆ ಹಾಕಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಬಳಿಕ ಮಹಿಳೆಯ ತಾಯಿ ಹಾಗೂ ನೆರೆಕರೆಯವರು ಸೇರಿಕೊಂಡು ಪರಿಸರದಲ್ಲಿ ಆರೋಪಿಗಾಗಿ ಹುಡುಕಾಟ ನಡೆಸಿದರೂ ಆತ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಸುಶ್ಮಿತಾ ಎಂಬವರು ನೀಡಿದ ದೂರಿನಂತೆ ಕಲಂ 354 (ಡಿ), 354 (ಸಿ) ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment