ಬಂಟ್ವಾಳ, ಆಗಸ್ಟ್ 26, 2023 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 3 ಕಳವು ಪ್ರಕರಣಗಳಲ್ಲಿ ಆರೋಪಿಯಾದ್ದು, ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿ ಸಜಿಪಮೂಡ ಗ್ರಾಮದ ಉಮ್ಮರ್ ಫಾರೂಕ್ ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಶುಕ್ರವಾರ ಮಾಣಿಯಲ್ಲಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯ ವಿರುದ್ದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕಳವು ಹಾಗೂ ಕೊಲೆಯತ್ನ ಸೇರಿದಂತೆ 14 ಪ್ರಕರಣಗಳು ಹಾಗೂ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ 3 ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
0 comments:
Post a Comment