ಬಂಟ್ವಾಳ, ಆಗಸ್ಟ್ 23, 2023 (ಕರಾವಳಿ ಟೈಮ್ಸ್) : ತಾಲೂಕಿನ ಸಜಿಪಮುನ್ನೂರು ಗ್ರಾಮದ ಕಂದೂರಿನಲ್ಲಿ ಮಂಗಳವಾರ ಸಂಜೆ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಕೊಣಾಜೆ ನಿವಾಸಿ ಅಬೂಬಕ್ಕರ್ ಕೋಡಿಜಾಲ್ ಎಂಬವರು ಗಾಯಗೊಂಡಿದ್ದಾರೆ.
ಅಬೂಬಕ್ಕರ್ ಕೋಡಿಜಾಲ್ ಅವರು ಮಂಗಳವಾರ ಸಂಜೆ ಕಂದೂರಿನಲ್ಲಿ ಸ್ಕೂಟರಿನಲ್ಲಿ ತೆರಳುತ್ತಿದ್ದ ವೇಳೆ ಮುಡಿಪು ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಾಯಗೊಂಡ ಅಬೂಬಕ್ಕರ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment