ಮಂಗಳೂರು, ಆಗಸ್ಟ್ 31, 2023 (ಕರಾವಳಿ ಟೈಮ್ಸ್) : ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಡೆ ಹಾಗೂ ಅವರ ಕುಟುಂಬದ ಸದಸ್ಯರ ಬಗ್ಗೆ ಸಾಮಾಜಿಕ ಜಾಲತಾಣ ವಾಟ್ಸಪ್ ತಾಣದಲ್ಲಿ ಆಕ್ಷೇಪಾರ್ಹ ಬರವಣಿಗೆ ಹಾಕಿರುವ ಬಗ್ಗೆ ಆರೋಪಿ ಸುರೇಶ್ ರಾಜ್ ಎಂಬಾತನ ವಿರುದ್ದ ಆ 29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 79/2023 ಕಲಂ 505(1)(ಬಿ), 509 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳದಲ್ಲಿ ಹತ್ಯೆಯಾದ ಸೌಜನ್ಯಾ ಅವರ ತಾಯಿಯನ್ನುದ್ದೇಶಿಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ತಾಣದಲ್ಲಿ ಆಕ್ಷೇಪಾರ್ಹ ಬರಹ (ಕಮೆಂಟ್) ಹಾಕಿರುವ ಬಗ್ಗೆ ಆರೋಪಿ ರಾಘವೇಂದ್ರ ಭಟ್ ಎಂಬಾತನ ವಿರುದ್ದ ಆ 28 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 85/2023 ಕಲಂ 509 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ಎರಡೂ ಪ್ರಕರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
0 comments:
Post a Comment