ಧರ್ಮಸ್ಥಳ, ಆಗಸ್ಟ್ 26, 2023 (ಕರಾವಳಿ ಟೈಮ್ಸ್) : ಇಲ್ಲಿನ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು, ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ಆಗಸ್ಟ್ 9 ರಂದು ನಡೆದ ಪ್ರಾವಿಜನ್ ಸ್ಟೋರ್ ಕಳ್ಳತನ ಪ್ರಕರಣ ಬೇಧೀಸಿದ ಧರ್ಮಸ್ಥಳ ಪೊಲೀಸರು ಆರೋಪಿ ಕಾರ್ಕಳ ಅತ್ತೂರು ಗ್ರಾಮದ ನಿವಾಸಿ ಸುರೇಶ್ ಕೆ ಪೂಜಾರಿ (50) ಎಂಬಾತನನ್ನು ಬಂಧಿಸಿ ನಗದು ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆಗಸ್ಟ್ 9 ರಂದು ಸೋಮಂತಡ್ಕ ಎಂಬಲ್ಲಿ ಪ್ರಾವಿಜನ್ ಸ್ಟೋರ್‍ವೊಂದಲ್ಲಿ 50 ಸಾವಿರ ರೂಪಾಯಿ ನಗದು ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ಅಪರಾಧ ಕ್ರಮಾಂಕ 55/2023 ಕಲಂ 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಆರೋಪಿತ ಕಾರ್ಕಳ ಅತ್ತೂರು ಗ್ರಾಮದ ಸುರೇಶ ಕೆ ಪೂಜಾರಿ (50) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿ ಆರೋಪಿಯು ಬೆಳ್ತಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟಿಯೊಂದನ್ನು ಕಳ್ಳತನ ಮಾಡಿ ಸದ್ರಿ ಸ್ಕೂಟಿಯನ್ನು ಉಪಯೋಗಿಸಿಕೊಂಡು ಕೃತ್ಯವೆಸಗಿದ್ದು, ಸುಮಾರು ಒಂದುವರೆ ತಿಂಗಳಿನಿಂದ ಧರ್ಮಸ್ಥಳ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ನೆರಿಯಾ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ, ವೇಣೂರು ಕಡೆಗಳಲ್ಲಿ ಗೂಡಂಗಡಿಗಳನ್ನು ಸರಣಿ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವ ಠಾಣೆ, ಹಿರಿಯಡ್ಕ ಠಾಣೆ, ಪಡುಬಿದ್ರಿ ಠಾಣೆ, ಮುಲ್ಕಿ ಠಾಣೆ, ಹೆಬ್ರಿ ಠಾಣೆ, ಉಡುಪಿ ನಗರ ಠಾಣೆ, ದಾವಣಗೆರೆ ಗ್ರಾಮಾಂತರ ಠಾಣೆ, ಮತ್ತು ಬೆಳಗಾಂ ಮಾರ್ಕೆಟ್ ಪೆÇಲೀಸ್ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಲ್ಲಿದ್ದವನು 2 ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರ ಬಂದು ಪುನಃ ಕಳ್ಳತನ ಚಾಳಿ ಮುಂದುವರೆಸಿರುತ್ತಾನೆ ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.
ಆರೋಪಿತನಿಂದ 20,220/- ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಅಂದಾಜು 25 ಸಾವಿರ ರೂಪಾಯಿ ಮೌಲ್ಯದ ಸ್ಕೂಟರ್ ವಾಹನಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
0 comments:
Post a Comment