ಬಂಟ್ವಾಳ, ಆಗಸ್ಟ್ 24, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರ ಸ್ವಗೃಹ ಗಂಜಿಮಠದ ಒಡ್ಡೂರು ಫಾಮ್ರ್ಸ್ ಇಲ್ಲಿ ತ್ಯಾಜ್ಯದಿಂದ ಬಹುಪಯೋಗಿ ಸಿ.ಎನ್.ಜಿ. ಅನಿಲ ಉತ್ಪಾದನಾ ಘಟಕ ನಿರ್ಮಾಣಗೊಂಡಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಆಗಸ್ಟ್ 25 ರಂದು ಶುಕ್ರವಾರ (ನಾಳೆ) ಸಂಜೆ 5 ಗಂಟೆಗೆ ನಡೆಯಲಿದೆ.
ಕೇಂದ್ರ ಸಚಿವ ಭಗವಂತ ಖೂಬಾ ಘಟಕವನ್ನು ಉದ್ಘಾಟಿಸಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
0 comments:
Post a Comment