ಬಂಟ್ವಾಳ, ಆಗಸ್ಟ್ 27, 2023 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಅವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳವುಗೈದ ಘಟನೆ ಭಾನುವಾರ ಬೆಳಕಿಗೆ ಬಂದಿದೆ.
ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಅವರು ಶನಿವಾರ ರಾತ್ರಿ 9.30ರ ಬಳಿಕ ಮನೆಗೆ ಬೀಗ ಹಾಕಿ ಅತ್ತೆ ಮನೆಗೆ ತೆರಳಿದ್ದರು. ಭಾನುವಾರ ಬೆಳಿಗ್ಗೆ ಮಗನೊಂದಿಗೆ ಮರಳಿ ಮನೆಗೆ ಬಂದು ನೋಡುವಾಗ ಮನೆಯ ಹಿಂದಿನ ಬಾಗಿಲು ತೆರೆದಿತ್ತು. ಮನೆಯೊಳಗೆ ಪರಿಶೀಲನೆ ನಡೆಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಮನೆಯೊಳಗಿನ ಕಪಾಟಿನಲ್ಲಿದ್ದ 1.12 ಲಕ್ಷ ರೂಪಾಯಿ ಮೌಲ್ಯದ 4 ಪವನ್ ತೂಕದ ಚಿನ್ನದ ನೆಕ್ಲೆಸ್ ಹಾಗೂ 11 ಸಾವಿರ ರೂಪಾಯಿ ನಗದು ಕಳವಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 82/2023 ಕಲಂ 454, 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment