ಬೆಂಗಳೂರು, ಆಗಸ್ಟ್ 19, 2023 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ತೀರಾ ಮಂಕಾಗಿದ್ದ ಮುಂಗಾರು ಆಗಸ್ಟ್ 19 ರಿಂದ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಹಗುರವಾಗಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜ್ಯದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮಲೆನಾಡು ಪ್ರದೇಶ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಉಳಿದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಕುಂಠಿತಗೊಂಡಿದ್ದ ಮುಂಗಾರು ಚುರುಕುಗೊಳ್ಳುವ ಭರವಸೆ ಮೂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 18 ರ ಸಂಜೆಯಿಂದಲೇ ಭಾರೀ ಮಳೆ ಸುರಿಯುತ್ತಿದೆ.
0 comments:
Post a Comment