ಬಂಟ್ವಾಳ, ಆಗಸ್ಟ್ 18, 2023 (ಕರಾವಳಿ ಟೈಮ್ಸ್) : ತಾಲೂಕಿನ ಪುದು ಗ್ರಾಮದ ಅಮ್ಮೆಮ್ಮಾರ್ ಎಂಬಲ್ಲಿ ರೈಲ್ವೇ ಟ್ರಾಕ್ ಬಳಿ ಅಪರಿಚಿತರು ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿ ಅಕ್ರಮವಾಗಿ ನದಿಯಿಂದ ಮರಳನ್ನು ಕಳವು ಮಾಡಿ ಅಧಿಕ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಶೇಖರಿಸಿ ಇಟ್ಟಿರುವ ಪ್ರಕರಣ ಭೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 79/2023 ಕಲಂ 379 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
0 comments:
Post a Comment