ಬೆಂಗಳೂರು, ಆಗಸ್ಟ್ 05, 2023 (ಕರಾವಳಿ ಟೈಮ್ಸ್) : ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಉಚಿತ ಗ್ಯಾರಂಟಿ ಯೋಜನೆಯಾದ “ಗೃಹಜ್ಯೋತಿ” ಯೋಜನೆಗೆ ಶನಿವಾರ (ಆಗಸ್ಟ್ 5) ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡಿನ ಪ್ರತಿ ಮನೆಗೆ 200 ಯುನಿಟ್‌ಗಳ ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ಇಂದು ಚಾಲನೆ ನೀಡಿದ್ದೇವೆ. ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದಾಗಿ ಇಡೀ ದೇಶವೇ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ಈ ಹೊತ್ತಿನಲ್ಲಿ ತಿಂಗಳ ವಿದ್ಯುತ್ ಬಿಲ್ ಹೊರೆ ನಾಡಬಂಧುಗಳನ್ನು ಬಾಧಿಸದಿರಲಿ ಎಂಬ ಸದಾಶಯ ನಮ್ಮದು. ಅಗತ್ಯಕ್ಕನುಗುಣವಾಗಿ ವಿದ್ಯುತ್ ಬಳಸಿ, ಯೋಜನೆಯ ಪೂರ್ಣ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂಧನ ಸಚಿವ ಕೆ.ಜೆ. ಜಾರ್ಜ್, ರಾಜ್ಯಸಭಾ ಸದಸ್ಯ ಹಾಗೂ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯ ಸಚಿವ ಸಂಪುಟದ ಸದಸ್ಯರು, ಶಾಸಕರು ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಕಲಬುರ್ಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಂ ಅವರು ಜಿಲ್ಲೆಗೆ ಆಗಮಿಸಿದ ಸಿಎಂ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
0 comments:
Post a Comment