ಮಂಗಳೂರು, ಆಗಸ್ಟ್ 29, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಸುರಿದ ಭಾರೀ ಮಳೆಗೆ ನೀಡಲಾಗಿದ್ದ ಶಾಲಾ ರಜೆಯನ್ನು ಸರಿದೂಗಿಸಲು ಸೆಪ್ಟೆಂಬರ್ ತಿಂಗಳ ಮೊದಲ ವಾರದಿಂದಲೇ ಶನಿವಾರಗಳಂದು ಪೂರ್ಣ ದಿನ ತರಗತಿ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.
ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದಾರೆ.
ಜುಲೈನಲ್ಲಿ ಸುರಿದ ಭಾರೀ ಮಳೆ ಕಾರಣದಿಂದಾಗಿ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿ ಅವರ ನಿರ್ದೇಶನದಂತೆ ಏಳು ದಿನ ರಜೆ ಸಾರಲಾಗಿತ್ತು. ಆ ದಿನಗಳಿಂದ ವಿದ್ಯಾರ್ಥಿಗಳಿಗೆ ಆದ ನಷ್ಟವನ್ನು ಭರ್ತಿ ಮಾಡಲು14 ಶನಿವಾರಗಳಂದು ಇಡೀ ದಿನ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.
0 comments:
Post a Comment