ಸಿದ್ದಕಟ್ಟೆ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರಿಗೆ ಗಾಯ - Karavali Times ಸಿದ್ದಕಟ್ಟೆ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರಿಗೆ ಗಾಯ - Karavali Times

728x90

22 August 2023

ಸಿದ್ದಕಟ್ಟೆ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರಿಗೆ ಗಾಯ

ಬಂಟ್ವಾಳ, ಆಗಸ್ಟ್ 22, 2023 (ಕರಾವಳಿ ಟೈಮ್ಸ್) :  ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಾಯಗೊಂಡ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ಭಾನುವಾರ ನಡೆದಿದೆ. ಬಂಟ್ವಾಳ ಸಮೀಪದ ಉಳಿ ನಿವಾಸಿ ಚೆನ್ನಪ್ಪ ಪ್ರಾಯ (52) ಎಂಬವರು ತನ್ನ ಸ್ಕೂಟರಿನಲ್ಲಿ ಸ್ನೇಹಿತ ಅಣ್ಣು ಅವರ ಜೊತೆ ಸಹಸವಾರನಾಗಿ ಪ್ರಯಾಣಿಸುತ್ತಿದ್ದ ವೇಳೆ ಸಿದ್ದಕಟ್ಟೆಯಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 114/2023 ಕಲಂ 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಸಿದ್ದಕಟ್ಟೆ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರಿಗೆ ಗಾಯ Rating: 5 Reviewed By: karavali Times
Scroll to Top